ಚಾಮರಾಜನಗರ: ಕೊಳ್ಳೇಗಾಲ ಸಹಿತ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಸ್ ಪಿ ಸ್ಪರ್ಧೆ
ಚಾಮರಾಜನಗರ: ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ. ಈಗಾಗಲೇ ರಾಜ್ಯಾದ್ಯಂತ ಅರ್ಜಿ ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದೆ. ಎಲ್ಲ ಅರ್ಜಿಗಳನ್ನು ಕ್ರೋಢೀಕರಿಸಿ ಜ.15ರಂದು ಪಕ್ಷದ ವರಿಷ್ಠರಾದ ಮಾಯಾವತಿ ಅವರ ಹುಟ್ಟುಹಬ್ಬದ ದಿನ. ರಾಜ್ಯದ 224 ಕ್ಷೇತ್ರಗಳ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ಡಿ.27 ರಂದು ಬೆಂಗಳೂರಿನಲ್ಲಿ ಬಿಎಸ್ಪಿ ಯುವ ಕಾರ್ಯಕರ್ತರ ಸಮಾವೇಶ:
ಪಕ್ಷದ ವತಿಯಂದ ಬೆಂಗಳೂರಿನಲ್ಲಿ ಡಿ.27ರಂದು ಮಂಗಳವಾರ ಯುವ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪಕ್ಷದ ರಾಷ್ಟಿಯ ಸಂಯೋಜಕರಾದ ಆಕಾಶ್ ಆನಂದ್ ಭಾಗವಹಿಸಲಿದ್ದಾರೆ ಎಂದರು.
ದೇಶ, ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಪ್ರಸ್ತುತ ದಿನಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಜನಸಾಮಾನ್ಯ ಪರ ಯೋಜನೆ, ಕಾನೂನು ರೂಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದ ಅರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಹೆಚ್ಚಾಗುತ್ತಿದೆ. ಧರ್ಮಧರ್ಮಗಳ ನಡುವೆ ಕೋಮುದ್ವೇಷ ಉಂಟಾಗಿದೆ. 21 ಆದರೆ ಶತಮಾನದಲ್ಲೂ ಕೂಡ ಜನರ ಸಮಸ್ಯೆಗಳಿಗೆ ಪ್ರತಿದಿನ ಹೋರಾಟ ನಡೆಯುತ್ತಿದೆ. ಸಂವಿಧಾನದ ಆಶಯಗಳೇ ಬುಡಮೇಲಾಗಿದೆ. ಪ್ರಬುದ್ದ ಭಾರತ ನಿರ್ಮಾಣಕ್ಕಾಗಿ ಸರ್ವಜನಾಂಗದ ಹಿತಕ್ಕಾಗಿ ಬಹುಜನ ಸಮಾಜ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಯಾಗುತ್ತಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಪಣತೊಟ್ಟಿದ್ದು ಸಿದ್ದತೆಗಳು ನಡೆಯುತ್ತಿದೆ. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ನಾವು ಶ್ರಮಿಸಲಾಗುತ್ತಿದೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾದ್ಯಕ್ಷ ಬ್ಯಾಡಮೂಡ್ಲಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಅಮಚವಾಡಿ ಪ್ರಕಾಶ್, ಉಪಾಧ್ಯಕ್ಷ ಗಗನ್ಚಂದ್ರಶೆಟ್ಟಿ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka