ಕೇಂದ್ರ ಬಜೆಟ್ ಮೇಲೆ ನಂಬಿಕೆಯಿಲ್ಲ: ಎಚ್‌.ಡಿ.ಕುಮಾರಸ್ವಾಮಿ - Mahanayaka

ಕೇಂದ್ರ ಬಜೆಟ್ ಮೇಲೆ ನಂಬಿಕೆಯಿಲ್ಲ: ಎಚ್‌.ಡಿ.ಕುಮಾರಸ್ವಾಮಿ

h d kumaraswamy
01/02/2022


Provided by

ಮಂಡ್ಯ: ನನಗೆ ಕೇಂದ್ರದ ಬಜೆಟ್ ಮೇಲೆ ನಂಬಿಕೆ ಇಲ್ಲ. ಕರ್ನಾಟಕ ರಾಜ್ಯದ ಮೇಲೆ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ನೀರಾವರಿ ಯೋಜನೆಗಳನ್ನು ನೆನೆಗುದಿಗೆ ಬಿದ್ದಿದೆ. ನೆನೆಗುದಿಗೆ ಬಿದ್ದ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಬೇಕಿದೆ. ಮೇಕೆದಾಟು, ಮಹದಾಯಿ, ಭದ್ರ ಮೇಲ್ದಂಡೆ ಯೋಜನೆ ಸೇರಿ ಅನೇಕ ಯೋಜನೆಗಳನ್ನು ಮಾಡಬೇಕಿದೆ. ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ಜನತೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.

ರೈಲ್ವೆ ಯೋಜನೆ, ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಹೊತ್ತು ಕೊಡಬೇಕಿದೆ. ಇದು ಹಲವು ವರ್ಷಗಳ ನಮ್ಮ ಬೇಡಿಕೆ. ಆದರೆ ಕೇಂದ್ರ ಸರ್ಕಾರ ನಡವಳಿಕೆ ಬಗ್ಗೆ ನನಗೆ ಈಗಲೂ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ