12:07 AM Thursday 21 - August 2025

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತ: ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆ

bangalore
23/10/2024

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರನೆ ಮುಂದುವರಿದಿದೆ.

ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮೃತರ ಸಂಖ್ಯೆ 5 ಕ್ಕೇರಿಯಾಗಿದೆ. ರಕ್ಷಣೆ ಮಾಡಿದಂತಹ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದ ಐವರು ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸದ್ಯ, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದೆ.

ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ.ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version