3:58 PM Saturday 13 - December 2025

ಬುಲೆಟ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನ ದಾರುಣ ಸಾವು

udupi news
18/08/2022

ಕುಂದಾಪುರ: ಬುಲೆಟ್ ವೊಂದು ಸ್ಕೂಟರ್ ಗೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಕೋಟೆಬೆಟ್ಟು ಕ್ರಾಸ್‌ ಬಳಿ ಆ.17ರಂದು ಸಂಜೆ ನಡೆದಿದೆ.

ಮೃತ ಸ್ಕೂಟರ್ ಸವಾರನನ್ನು ಕೆ.ಭಾಸ್ಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಕೋಟೆಬೆಟ್ಟು ಕ್ರಾಸ್‌ನಿಂದ ಸಿದ್ದಾಪುರ ಕಡೆಗೆ ಸ್ಕೂಟರ್ ನಲ್ಲಿ  ಹೋಗುತ್ತಿದ್ದರು. ಈ ವೇಳೆ ಸಿದ್ದಾಪುರ ಕಡೆಯಿಂದ ಅಂಪಾರು ಕಡೆಗೆ ಬರುತ್ತಿದ್ದ ಬುಲೆಟ್ ಸವಾರ ಅರವಿಂದ ಯಡಿಯಾಳ ಎಂಬಾತ ಅತೀ ವೇಗದಿಂದ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ.

ಇದರ ಪರಿಣಾಮ ಸ್ಕೂಟರ್ ಸಮೇತ ಭಾಸ್ಕರ್ ಶೆಟ್ಟಿ ರಸ್ತೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version