ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು: ಅತ್ಯಾಚಾರಿ ಆರೋಪಿ ಮನೆ ಢಮಾರ್ - Mahanayaka
12:19 AM Thursday 21 - August 2025

ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು: ಅತ್ಯಾಚಾರಿ ಆರೋಪಿ ಮನೆ ಢಮಾರ್

05/07/2023


Provided by

ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮನೆಯ ಮೇಲೆ ಉತ್ತರ ಪ್ರದೇಶದ ಅಧಿಕಾರಿಗಳು ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ.

ಆರೋಪಿ ಸೋನು ಅಲಿಯಾಸ್ ಸಿಕಂದರ್ ಲವ್ ಜಿಹಾದ್ ಆರೋಪ ಎದುರಿಸುತ್ತಿದ್ದಾನೆ. ಉತ್ತರ ಪ್ರದೇಶದ ಫತೇಪುರ್‌ನಲ್ಲಿ 19 ವರ್ಷದ ಯುವತಿಯನ್ನು ಆರೋಪಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯ ಮನೆ ಕೆಡವುವ ಮುನ್ನ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಈ ವೇಳೆ ಎಸ್‍ಡಿಎಂ, ತಹಶೀಲ್ದಾರ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ಆರೋಪಿ ಮತ್ತು ಯುವತಿ ಮದುವೆಯೊಂದರಲ್ಲಿ ಭೇಟಿಯಾಗಿದ್ದರು. ಅಲ್ಲಿ ಆರೋಪಿ ತಾನು ಹಿಂದೂ ವ್ಯಕ್ತಿ ಎಂದು ಯುವತಿಗೆ ಪರಿಚಯಿಸಿಕೊಂಡಿದ್ದ. ಬಳಿಕ ಒಬ್ಬಂಟಿಯಾಗಿ ಭೇಟಿಯಾಗುವಂತೆ ಯುವತಿಗೆ ಹೇಳಿದ್ದ. ನಂತರ ಯುವತಿ ಆತನನ್ನು ಭೇಟಿಯಾದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿ, ಸಿಮೆಂಟ್ ಬ್ಲಾಕ್‍ಗಳಿಂದ ಹಲ್ಲೆ ನಡೆಸಿದ್ದ. ಯುವತಿ ತೀವ್ರ ಗಾಯಗೊಂಡು ಅಸ್ವಸ್ಥಳಾದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಯುವತಿಯ ಕುಟುಂಬಸ್ಥರು ಆಕೆಯನ್ನು ಹುಡುಕಿ ಕಾನ್ಪುರ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಳು.

ಆರೋಪಿಯ ತಂದೆ ಮತ್ತು ಆತನ ಸಹೋದರನ ವಿರುದ್ಧವೂ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಆರೋಪಿ ಸೋನು ಅಲಿಯಾಸ್ ಸಿಕಂದರ್, ಆತನ ತಂದೆ ಮತ್ತು ಆತನ ಸಹೋದರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಸಂಬಂಧ ಫತೇಪುರನ ಸದರ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ