ಖಾಸಗಿ ಬಸ್‌ಗಳು ಪರಸ್ಪರ ಡಿಕ್ಕಿ: ಬಸ್ ಸಂಪೂರ್ಣ ನಜ್ಜುಗುಜ್ಜು - Mahanayaka

ಖಾಸಗಿ ಬಸ್‌ಗಳು ಪರಸ್ಪರ ಡಿಕ್ಕಿ: ಬಸ್ ಸಂಪೂರ್ಣ ನಜ್ಜುಗುಜ್ಜು

bus accident
14/11/2022


Provided by

ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ