ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

29/09/2022
ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka