ರಸ್ತೆ ದಾಟಲು ನಿಂತಿದ್ದ ವೇಳೆ ಬಸ್ ಡಿಕ್ಕಿ:  ವಿದ್ಯಾರ್ಥಿನಿಯ ದಾರುಣ ಸಾವು - Mahanayaka
11:36 PM Wednesday 10 - September 2025

ರಸ್ತೆ ದಾಟಲು ನಿಂತಿದ್ದ ವೇಳೆ ಬಸ್ ಡಿಕ್ಕಿ:  ವಿದ್ಯಾರ್ಥಿನಿಯ ದಾರುಣ ಸಾವು

udupi
11/03/2023

ಕಾಪು: ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ ಪಟ್ಟ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ66 ರಲ್ಲಿ‌ ಇಂದು ಬೆಳಗ್ಗೆ ನಡೆದಿದೆ.


Provided by

ಮೃತರನ್ನು ಕಾಪು ಮಹಾದೇವಿ ಫ್ರೌಡ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ವರ್ಷಿತಾ( 13 ) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆಯಿತು.

ಇದರಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ