ಆಟೋಗೆ ಹಿಂದಿನಿಂದ ಡಿಕ್ಕಿ ಹೊಡೆದ ಬಸ್: ಇಬ್ಬರ ದಾರುಣ ಸಾವು
14/09/2024
ಚಿಕ್ಕಮಗಳೂರು: ಆಟೋಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ನಲ್ಲಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಮತ್ತೋರ್ವ ಸಾವನ್ನಪ್ಪಿದವರಾಗಿದ್ದಾರೆ. ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೊಬ್ಬ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ.
ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದೆ. ಆಟೋಗೆ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಸ್ತೆಯ ಬದಿಯ ಹೂವಿನ ಅಂಗಡಿ ಸಂಪೂರ್ಣ ಜಖಂ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: