6:31 PM Wednesday 12 - November 2025

ಬೈಕ್‌ ಗೆ ಡಿಕ್ಕಿ ಹೊಡೆದ ಬಸ್:‌ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಸಾವು

police
22/02/2024

ರಾಯಚೂರು: ಸರ್ಕಾರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ ಬಸ್‌ ಬರುತ್ತಿದ್ದು, ಈ ವೇಳೆ ಮೂವರು ತೆರಳುತ್ತಿದ್ದ ಬೈಕ್‌ ಗೆ  ಡಿಕ್ಕಿಯಾಗಿದ್ದು, ಮೂವರು ಬೈಕ್‌ ಸವಾರರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಮೃತದೇಹವನ್ನು ರಾಯಚೂರು ರಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಯರಗೇರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version