1:42 PM Saturday 12 - September 2026

ಕೆಟ್ಟುನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್: ಇಬ್ಬರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

shivamogga accident
30/07/2025

ಶಿವಮೊಗ್ಗ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗದ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ನಡೆದಿದೆ.

ದುರ್ಗಾಂಬ ಹೆಸರಿನ ಬಸ್‌ ಮಂಗಳೂರಿನಿಂದ ರಾತ್ರಿ ಹೊರಟು, ಚಿತ್ರದುರ್ಗದ ಚಳ್ಳಕೆರೆಗೆ ತಲುಪಬೇಕಿತ್ತು. ಆದ್ರೆ ಬುಧವಾರ ಬೆಳಗ್ಗಿನ ಜಾವ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ ಅಣ್ಣಪ್ಪ (38) ಹಾಗೂ ಪ್ರಯಾಣಿಕ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಹರ್ಷಿತ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಣ್ಣಪ್ಪ ಈಚೆಗಷ್ಟೇ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಉಮೇಶ್ (50), ಪ್ರಸಾದ್ (40), ವಿಷ್ಣು(21), ಮಂಜುನಾಥ್ (45), ಸುಜಾತಾ (40), ಅನಂದ್ ನಾಯ್ಕ(50), ನೀಲಾಂಬಿಕಾ (45), ಪ್ರಸಾದ್ (43), ಬಿಂದು (20), ಶಶಾಂಕ್ (20), ಲಕ್ಷ್ಮೀ(35), ಶ್ರೀರಾಮುಲು(42) ಹಾಗೂ ಕಾರ್ತಿಕ್ (32) ಎಂಬವರು ಗಾಯಗೊಂಡಿದ್ದಾರೆ. ಒಟ್ಟು 13 ಜನರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ಮತ್ತಿರ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ಶಿವಮೊಗ್ಗ–ತೀರ್ಥಹಳ್ಳಿ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version