ಕಲ್ಯಾಣ ಮಂಟಪದ ಎದುರು ಬೈಕ್ ಗೆ ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಉಡುಪಿ: ಹಿರಿಯಡ್ಕ: ಓಂತಿಬೆಟ್ಟು ಕಲ್ಯಾಣ ಮಂಟಪದ ಎದುರು ಇಂದು ಬೆಳಗ್ಗೆ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಉಡುಪಿಯ ಕೃಷ್ಣ ಪೂಜಾರಿ(60) ಮೃತ ದುದೈರ್ವಿ. ಉಡುಪಿ ಕಡೆಯಿಂದ ಹಿರಿಯಡ್ಕ ಕಡೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಸ್ಥಳದಲ್ಲಿಯೇ ಮೃತಪಟ್ಟರು.
ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರ, ನಿವೃತ್ತ ಬ್ಯಾಂಕ್ ಉದ್ಯೋಗಿ, ಹಿರಿಯಡ್ಕ ನಿವಾಸಿ ಭೋಜ ಶೆಟ್ಟಿ ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























