ಬಸ್ ಚಾಲಕರಿಂದ ಬಸ್ ಮಾಲಕನ ಬರ್ಬರ ಹತ್ಯೆ!: ಮಲ್ಪೆಯಲ್ಲಿ ಬೆಚ್ಚಿಬೀಳಿಸಿದ ಘಟನೆ - Mahanayaka
5:55 PM Sunday 28 - September 2025

ಬಸ್ ಚಾಲಕರಿಂದ ಬಸ್ ಮಾಲಕನ ಬರ್ಬರ ಹತ್ಯೆ!: ಮಲ್ಪೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

saifuddin atradi
27/09/2025

ಉಡುಪಿ/ಮಲ್ಪೆ:  ಬಸ್ ಮಾಲಿಕರೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ  ಶನಿವಾರ ಮಲ್ಪೆಯ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿದೆ.


Provided by

ಸೈಫುದ್ದೀನ್ ಆತ್ರಾಡಿ ಎಂಬವರು ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದು, ಇವರು ಎಕೆಎಂಎಸ್ ಬಸ್ ನ ಮಾಲಿಕರು ಎಂದು ತಿಳಿದು ಬಂದಿದೆ. ಸೈಫುದ್ದೀನ್ ತಮ್ಮಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.

 ಬಸ್ ಚಾಲಕರಿಂದ ಕೃತ್ಯ?:

ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯುಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.

ಸೈಫುದ್ದಿನ್ ಮೇಲಿತ್ತು 18 ಪ್ರಕರಣಗಳು:

ಹತ್ಯೆಗೀಡಾದ    ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ತಿಳಿಸಿದರು.

ಮೂವರಿಂದ ಏಕಕಾಲಕ್ಕೆ ದಾಳಿ:  ಬೆಳಗ್ಗೆ 10 ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಕೊಲೆಗೆ ನಿಖರ ಕಾರಣ ತನಿಖೆಯಿಂದ ಬಹಿರಂಗವಾಗಬೇಕಾಗಿದೆ. ಚಾಕು ಮತ್ತು ತಲವಾರ್ ನಿಂದ ದಾಳಿ ಮಾಡಿದ್ದಾರೆ. ದೇಹದ ಹಲವೆಡೆ ಇರಿದ ಗಾಯಗಳಿವೆ ಎಂದು ಅವರು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ