ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಬಸ್! - Mahanayaka
4:14 PM Saturday 18 - October 2025

ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಬಸ್!

sampaje
08/04/2024

ಕೊಡಗು: ಮಡಿಕೇರಿ ಬಳಿಯ ಸಂಪಾಜೆ ಬಳಿ ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಷ್ಟೀಯ ಹೆದ್ದಾರಿ 275ರಲ್ಲಿ ನಡೆದಿದೆ.


Provided by

ಬೆಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಸುಳ್ಯಕ್ಕೆ ಹೋಗ್ತಿದ್ದ ಗೌರಿ ಶಂಕರ ಹೆಸರಿನ ಖಾಸಗಿ ಬಸ್ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ರಸ್ತೆಗೆ ಅಡ್ಡವಾಗಿ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು,  ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ