ಕಂದಕಕ್ಕೆ ಉರುಳಿ ಬಿದ್ದ ಬಸ್ : 12 ಮಂದಿಯ ದಾರುಣ ಸಾವು

maharastra
15/04/2023

ಮುಂಬೈ: ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಬಸ್ನಲ್ಲಿದ್ದ 28ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾದ ಘಟನೆ ಇಂದು ಬೆಳಗಿನ ಜಾವ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ.

ಬಸ್ ಕಣಿವೆಗೆ ಉರುಳಿಬಿದ್ದ ರಭಸಕ್ಕೆ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಅಲ್ಲದೆ ಬಸ್ ನಲ್ಲಿದ್ದ ಬಹುತೇಕ ಸೀಟ್ ಗಳು ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಮಹಾರಾಷ್ಟ ಸರ್ಕಾರವು ಬಸ್ ಅಪಾಘತದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version