ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ಟೆಂಪೋ ರಿಕ್ಷಾ
ಗೂಡ್ಸ್ ಟೆಂಪೋ ರಿಕ್ಷಾವೊಂದು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ತೀವ್ರವಾಗಿ ಗಾಯಗೊಂಡಿರುವ ಗೂಡ್ಸ್ ರಿಕ್ಷಾ ಚಾಲಕ ಸಹಿತ ಇಬ್ಬರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಕರಾವಳಿ ಬೈಪಾಸ್ ಕಡೆಯಿಂದ ಉಡುಪಿ ಕಡೆಗೆ ಆಗಮಿಸುತ್ತಿದ್ದ ಬಸ್ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಡಿಕ್ಕಿ ಹೊಡೆಯಿತೆನ್ನಲಾಗಿದೆ.
ಅಪಘಾತದಿಂದ ಟೆಂಪೋ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ ಸ್ಥಳಕ್ಕೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka