ಬಸ್ ಡಿಕ್ಕಿಯಾಗಿ ಬಸ್ಸಿಗೆ ಕಾಯುತ್ತಿದ್ದ ವೃದ್ಧನ ದಾರುಣ ಸಾವು - Mahanayaka
7:39 PM Saturday 15 - November 2025

ಬಸ್ ಡಿಕ್ಕಿಯಾಗಿ ಬಸ್ಸಿಗೆ ಕಾಯುತ್ತಿದ್ದ ವೃದ್ಧನ ದಾರುಣ ಸಾವು

udupi news
02/10/2022

ಖಾಸಗಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ಸೆ.30ರಂದು ನಡೆದಿದೆ.

ಮೃತರನ್ನು 70ವರ್ಷದ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಅರೆಹೊಳೆ ಜಂಕ್ಷನ್ ಬಳಿಯ ಬೈಕ್ ಗ್ಯಾರೇಜ್ ನ ಬಳಿ ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದರು. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ APM ಬಸ್ ಆನಂದ ಶೆಟ್ಟಿಗೆ ಡಿಕ್ಕಿ‌ ಹೊಡೆದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆನಂದ ಶೆಟ್ಟಿ ಕೊನೆಯುಸಿರೆಳೆದಿದ್ದಾರೆ‌.  ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ