ಬಸ್ ಗೆ ಕಲ್ಲೆಸೆತ, ಟಯರ್ ಗೆ ಬೆಂಕಿ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ಲಾಲ್ ಭಾಗ್ ನ ಮನಪಾ ಕಚೇರಿ ಎದುರು ಪ್ರತಿಭಟನೆ ನಡೆದಿದ್ದು, ರಸ್ತೆ ತಡೆ ನಡೆಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಿಟಿ ಬಸ್ ವೊಂದರ ಮೇಲೆ ಕಲ್ಲೆಸೆದು ಬಸ್ಸಿನ ಗಾಜನ್ನು ಒಡೆದು ಹಾಕಲಾಗಿದೆ.
ಲೇಡಿಹಿಲ್ ನ ಬ್ರಹ್ಮಶ್ರೀನಾರಾಯಣಗುರು ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿತ್ತು. ಮಹಾನಗರ ಪಾಲಿಕೆ ಕಚೇರಿ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆವರೆಗೆ ಪ್ರತಿಭಟನೆ ಸಾಗಿತ್ತು. ಬಳಿಕ ರಸ್ತೆ ತಡೆ ನಡೆಸಲಾಗಿತ್ತು.
ಇನ್ನೂ ಬಸ್ ಗೆ ಕಲ್ಲು ಎಸೆದಿರುವ ವಿಚಾರವಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಮಾಡಲಿ, ಬಸ್ಸಿಗೆ ಕಲ್ಲೆಸೆದು ಯಾರಿಗಾದ್ರೂ ತೊಂದರೆ ಆದರೆ ಯಾರು ಹೊಣೆ ಎಂದು ಪ್ರಶ್ನೆ ಕೇಳಿ ಬಂದಿದೆ. ಪ್ರತಿಭಟನಾಕಾರರೇ ಬಸ್ ಗೆ ಕಲ್ಲು ಎಸೆದರೆ ಎನ್ನುವುದು ತಿಳಿದು ಬಂದಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth