ಖಾಸಗಿ ಬಸ್ ಗೆ ತಗಲಿದ ವಿದ್ಯುತ್ ತಂತಿ: ಐವರು ಪ್ರಯಾಣಿಕರ ದಾರುಣ ಸಾವು - Mahanayaka

ಖಾಸಗಿ ಬಸ್ ಗೆ ತಗಲಿದ ವಿದ್ಯುತ್ ತಂತಿ: ಐವರು ಪ್ರಯಾಣಿಕರ ದಾರುಣ ಸಾವು

12/01/2021

ಚೆನ್ನೈ: ಖಾಸಗಿ ಬಸ್ ಗೆ ವಿದ್ಯುತ್ ತಂತಿ ತಗಲಿದ ಪರಿಣಾಮ ಐವರು ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯಲ್ಲಿ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

 

ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಖಾಸಗಿ ಬಸ್ಸೊಂದು ತಿರವೈಯ್ಯೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಗೆ ವಿದ್ಯುತ್ ತಂತಿ ತಗಲಿದೆ. ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕರ ಮೇಲೆ ವಿದ್ಯುತ್ ಪ್ರವಹಿಸಿದೆ.

 

ಘಟನೆಯಲ್ಲಿ ಐವರು ಮೃತಪಟ್ಟಿದ್ದರೆ, 10ಕ್ಕೂ ಅಧಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ