ಕಾಂತಾರ: ಬೂತಕೋಲ ಹಿಂದೂ ಸಂಸ್ಕೃತಿ ಅಲ್ಲ, ಬಹುಜನ ಸಂಪ್ರದಾಯ: ನಟ ಚೇತನ್
ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಬೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಕಾಂತಾರ ಚಿತ್ರದ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು ಬೂತಕೋಲವು ಬಹುಜನ ಸಂಪ್ರದಾಯವಾಗಿದೆ. ಅದು ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತಲೂ ಹಿಂದೆಯೇ ಇತ್ತು ಎಂದಿದ್ದಾರೆ.
ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka