5:49 AM Wednesday 27 - August 2025

ಜನವರಿ 25: ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು: BVSನಿಂದ ವಿಚಾರ ಸಂಕಿರಣ

bvs
14/01/2023

ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ‘ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು’ ಎಂಬ ವಿಚಾರದಲ್ಲಿ ವಿಚಾರ ಸಂಕಿರಣವನ್ನು ಜನವರಿ 25ರಂದು ಆಯೋಜಿಸಲಾಗಿದೆ.

ಮಾನಸ ಗಂಗೋತ್ರಿ ಮೈಸೂರು ಇದರ ಬಿ.ಎಂ.ಶ್ರೀ ಸಭಾಂಗಣದಲ್ಲಿ 10:30ರ ವೇಳೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು,  ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಐಎಎಸ್ ಅವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ.

ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಮಾನಸ ಗಂಗೋತ್ರಿ ಮೈಸೂರು ಇದರ ಅಭಿವೃದ್ಧಿ ಅಧ್ಯಯನ ವಿಭಾಗದ ಸಿದ್ದರಾಜು ಹೂವಿನಕೊಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್, ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಟಿ.ಸಿ.ವರದೇಗೌಡ,  ದಲಿತ ಉದ್ದಿಮೆದಾರರ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾದ ಮಂಜುನಾಥ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಧಕರಾದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಪದಕಗಳ ಸರದಾರ ಎಂ.ಡಿ.ನಾಗೇಂದ್ರ ಹಾಗೂ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ನಡೆಸುವ ಪ್ರತಿಷ್ಠಿತ CLAT ಪರೀಕ್ಷೆಯಲ್ಲಿ ಮೊದಲ Rank ಪಡೆದ ಜ್ಞಾನಾಂಕಿತ್ ಜೆ.ಎ. ಅವರನ್ನು ಸನ್ಮಾನಿಸಲಾಗುವುದು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version