ಮೈಸೂರು ದಸರಾ: ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಯ ಕವಿತೆ ವಾಚಿಸಲಿರುವ ಬಿ.ಎ.ಮುಹಮ್ಮದಲಿ ಕಮ್ಮರಡಿ
ಬ್ಯಾರಿ ಸಮುದಾಯದ ಪ್ರಮುಖರ ಆಗ್ರಹದ ಬೆನ್ನಿಗೇ ಮೈಸೂರು ದಸರಾ ಉತ್ಸವದ ಪ್ರಧಾನ ಕವಿಗೋಷ್ಠಿಯಲ್ಲಿ ಕೊನೆಗೂ ಬ್ಯಾರಿ ಭಾಷೆಯ ಕವಿತೆಯ ವಾಚನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಂಗಳೂರಿನ ಬ್ಯಾರಿ ಕವಿ ಬಿ.ಎ.ಮುಹಮ್ಮದಲಿ ಕಮ್ಮರಡಿ ಅಕ್ಟೋಬರ್ 3ರಂದು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಹಾಲ್ ನಲ್ಲಿ ನಡೆಯಲಿರುವ ಪ್ರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿತೆ ವಾಚಿಸಲಿದ್ದಾರೆ.
ದಸರಾ ಕವಿಗೋಷ್ಠಿ ಉಪಸಮಿತಿಯಿಂದ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಲಾಗಿದೆ. ದಸರಾ ಪ್ರಧಾನ ಕವಿಗೋಷ್ಠಿಯಲ್ಲಿ ರಾಜ್ಯದ ಇತರೆಲ್ಲ ಭಾಷೆಗಳಿಗೆ ಅವಕಾಶ ನೀಡಿದ್ದರೂ ಬ್ಯಾರಿ ಭಾಷೆಗೆ ಅವಕಾಶ ನೀಡಿರಲಿಲ್ಲ. ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಬೆಂಗಳೂರು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ಟಿ.ಕೆ.ಶರೀಫ್ ಸಹಿತ ಹಲವು ಗಣ್ಯರು ಸರಕಾರದ ತಾರತಮ್ಯ ನೀತಿಯನ್ನು ಟೀಕಿಸಿ ಹೇಳಿಕೆ ನೀಡಿದ್ದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೂ ಬ್ಯಾರಿ ಭಾಷೆಗೆ ಕವಿಗೋಷ್ಠಿಯಲ್ಲಿ ಪ್ರಾತಿನಿಧ್ಯ ಒದಗಿಸದೇ ಇರುವುದಕ್ಕೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಮೈಸೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಹಮೀದ್ ಹಾಜಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಬುಧವಾರ ದಸರಾ ಉಪ ಸಮಿತಿಯ ಅಧ್ಯಕ್ಷರನ್ನು ಭೇಟಿಯಾಗಿ ಬ್ಯಾರಿ ಕವಿತೆಗೆ ಪ್ರಾತಿನಿಧ್ಯ ನೀಡಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ದಸರಾ ಪರಧಾನ ಕವಿಗೋಷ್ಠಿಯಲ್ಲಿ ಬ್ಯಾರಿ ಕವಿಯೊಬ್ಬರಿಗೆ ಪ್ರಾತಿನಿಧ್ಯ ನೀಡಲು ಉಪಸಮಿತಿ ನಿರ್ಧರಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























