ಪ್ರಥಮ ಸ್ಪರ್ಧೆಯಲ್ಲೇ ಕಮಾಲ್: ವಯನಾಡ್ ನಲ್ಲಿ ಗೆದ್ದು ಬೀಗಿದ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ತನ್ನ ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 4,10,910 ಮತ ಪಡೆದಿದ್ದಾರೆ. ಆ ಮೂಲಕ 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಗಳಿಸಿದ ಮತಕ್ಕಿಂತ 46488 ಮತ ಹೆಚ್ಚು ಗಳಿಸಿದ್ದಾರೆ.
ಫಲಿತಾಂಶದ ಹಿಂದಿನ ದಿನ ಬಿಜೆಪಿ ನಾಯಕ ಅನಿಲ್ ಕೆ ಆಂಟನಿ, ಪ್ರಿಯಾಂಕಾ ಗಾಂಧಿಯ ಗೆಲುವಿನ ಅಂತರವು 2024 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಳಿಸಿದ್ದಕ್ಕಿಂತ ಕಡಿಮೆಯಿರುತ್ತದೆ ಎಂದು ಹೇಳಿದ್ದರು. ಆದರೆ ಅಂತಿಮ ಫಲಿತಾಂಶ ಬಂದಾಗ ಪ್ರಿಯಾಂಕಾ ಅದೆಲ್ಲವನ್ನೂ ಬುಡಮೇಲು ಮಾಡಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದ ನಂತರ ಉತ್ತರ ಪ್ರದೇಶದ ರಾಯ್ ಬರೇಲಿಯನ್ನು ಉಳಿಸಿಕೊಂಡು ರಾಹುಲ್ ಗಾಂಧಿ ವಯನಾಡ್ ಕ್ಷೇತ್ರಕ್ಕೆ ರಾಜಿನಾಮೆ ನೀಡಿದ್ದರು. ಆ ಬಳಿಕ ಪಕ್ಷವು ಅವರ ಸಹೋದರಿ ಪ್ರಿಯಾಂಕಾರನ್ನು ಕಣಕ್ಕಿಳಿಸಿತು.
14 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ವಯನಾಡ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಶೇಕಡಾ 65 ರಷ್ಟು ಮತ ಚಲಾವಣೆಯಾಗಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 74ರಷ್ಟು ಮತದಾನ ನಡೆದಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj