ದ.ಕ. ಜಿಲ್ಲಾಧಿಕಾರಿಯ ನೂತನ ಕಚೇರಿ ಕಟ್ಟಡದ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ
29/08/2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆಗಸ್ಟ್ 29ರ ಮಂಗಳವಾರ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿ, ಸಲಹೆಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತರಾದ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




























