ಸಿಎಂ ಹತ್ಯೆ ಮಾಡುವುದಾಗಿ ಬೆದರಿಕೆ: ನಟ ಪವನ್ ಕಲ್ಯಾಣ್ ಅಭಿಮಾನಿ ಬಂಧನ - Mahanayaka

ಸಿಎಂ ಹತ್ಯೆ ಮಾಡುವುದಾಗಿ ಬೆದರಿಕೆ: ನಟ ಪವನ್ ಕಲ್ಯಾಣ್ ಅಭಿಮಾನಿ ಬಂಧನ

kalyan
22/01/2022


Provided by

ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್‌ ನಲ್ಲಿ ಸರಣಿ ಟ್ವೀಟ್‌ ಗಳನ್ನು ಮಾಡಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಟ್ವೀಟ್‌ ಗಳು ವೈರಲ್ ಆಗಿದ್ದನ್ನು ಗಮನಿಸಿ ಅವುಗಳನ್ನು ಅಳಿಸಿ ಹಾಕಿದ್ದಾನೆ.

ಈ ಕುರಿತು ಜಗನ್ ಸೇವಾದಳದ ಉಪಾಧ್ಯಕ್ಷ ಮಲ್ಯಂ ಶ್ರಿಕಾಂತ್ ಎನ್ನುವರು ತಿರುಪತಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಐಪಿ ವಿಳಾಸ ಆಧರಿಸಿ ಬೆದರಿಕೆ ಹಾಕಿದ್ದವನನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಫಿಲಿಪ್ಪೀನ್ಸ್​​​: 6.5 ತೀವ್ರತೆಯ ಭೂಕಂಪ

ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲವೇ ಕಾರಣ:  ಕುಟುಂಬಸ್ಥರಿಂದ ಆರೋಪ

ಧಾರ್ಮಿಕ ಸಂಕೇತಗಳೂ ಮತಾಧಾರಿತ ಅಸ್ಮಿತೆಯೂ

 

ಇತ್ತೀಚಿನ ಸುದ್ದಿ