ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಸಿಎಎ ಜಾರಿ: ಸಿಎಂ ಸಿದ್ದರಾಮಯ್ಯ

c.m siddaramaya
13/03/2024

ಉಡುಪಿ: ಕೇವಲ ಚುನಾವಣೆಯ ದೃಷ್ಟಿಯಿಂದ ಪೌರತ್ವ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಗಳನ್ನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಸಿಎಎ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಇನ್ನೂ ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ. ಕೆ.ಜಯಪ್ರಕಾಶ್ ಹೆಗಡೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷಾವಧಿ ಮುಗಿದ ಬಳಿಕ ಕಾಂಗ್ರೆಸಿಗೆ ಮರು ಸೇರ್ಪಡೆಯಾಗಿದ್ದು ಪಕ್ಷಕ್ಕೆ ಶಕ್ತಿ ತಂದಿದೆ ಎಂದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version