ಕೇಂದ್ರದ ಒಪ್ಪಿಗೆಯಂತೆ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ: ಸಿಎಂ ಮೋಹನ್ ಯಾದವ್ ಘೋಷಣೆ

ಕೇಂದ್ರವು ಸೂಚಿಸಿದಾಗ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
2019 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ಸಿಎಎ, 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಿದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಗುರಿಯನ್ನು ಹೊಂದಿದೆ.
ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರದ ನೀತಿ ಒಂದೇ ಆಗಿದೆ. ನಾವು ಶೇಕಡಾ 100 ರಷ್ಟು ಸಿದ್ಧರಾಗಿದ್ದೇವೆ. ಕೇಂದ್ರವು ಹೇಳಿದ ಕೂಡಲೇ ಸಿಎಎಯನ್ನು ಜಾರಿಗೆ ತರಲಾಗುವುದು ಎಂದು ಮೋಹನ್ ಯಾದವ್ ಆಜ್ ತಕ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನದ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಉಜ್ಜಯಿನಿ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth