ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ: ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು
ಚಿಕ್ಕಮಗಳೂರು: ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಡೂರು ತಾಲೂಕಿನ ಜಿಲ್ಲೆಯ ಸಕ್ಕರಾಯಪಟ್ಟಣದ ಸಿದ್ದರಹಳ್ಳಿಯಲ್ಲಿ ನಡೆದಿದೆ.
ಕ್ಯಾಬ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ರಾಜಪ್ಪ ಎಂಬ ಕ್ಯಾಬ್ ಚಾಲಕ ಈ ಕೃತ್ಯ ಎಸಗಿದ್ದು, ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ರಾಜಪ್ಪ, ಬೆಳಗ್ಗಿನಿಂದ ಸಂಜೆಯವರೆಗೂ ಶಾಲೆಯ ಬಳಿಯೇ ಇರುತ್ತಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka