ಡಿ.ಕೆ.ಶಿವಕುಮಾರ್ ಬೆಂಬಲಿಗರ 12 ಪ್ರಕರಣ ಸೇರಿದಂತೆ 62 ಮಿನಲ್ ಪ್ರಕರಣ ವಾಪಸ್ ಗೆ ಸಂಪುಟ ಒಪ್ಪಿಗೆ!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣಗಳು ಸೇರಿದಂತೆ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು 2019 ರಲ್ಲಿ ಡಿಕೆಶಿವಕುಮಾರ್ ಅವರನ್ನು ಬಂಧಿಸಿದಾಗ ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ ಸಾತನೂರು, ಕೋಡಿಹಳ್ಳಿಸೇರಿ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ, ರೈತ ಮುಖಂಡರು, ನಾನಾ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡುವ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕ್ಯಾಬಿನೆಟ್ ತೆಗೆದುಕೊಂಡಿತು.
ಇದರೊಂದಿಗೆ ಬೇರೆ ಬೇರೆ 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD