ಅಧಿವೇಶನದಲ್ಲಿ ಸಿಎಜಿ ವರದಿ ಮಂಡನೆ: ದಿಲ್ಲಿಯ ನೂತನ ಸಿಎಂ ರೇಖಾ ಹೇಳಿಕೆ

ಫೆಬ್ರವರಿ 24 ರಿಂದ ಪ್ರಾರಂಭವಾಗುವ ಮುಂಬರುವ ದಿಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಮಂಡಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾನುವಾರ ಪ್ರಕಟಿಸಿದ್ದಾರೆ.
ಈ ಹಿಂದಿನ ಸರ್ಕಾರವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗುಪ್ತಾ ಆರೋಪಿಸಿದ್ದು ಹೀಗಾಗಿ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ. “ಅತ್ಯಂತ ಮುಖ್ಯವಾದ ವಿಷಯ ಬರಲಿದೆ. ಮೊದಲ ಅಧಿವೇಶನದಲ್ಲಿ ಸಿಎಜಿ ವರದಿಯನ್ನು ಸದನದ ಮೇಜಿನ ಮೇಲೆ ಇಡಬೇಕು ಎಂದು ನಾವು ಹೇಳಿದ್ದೇವೆ. ಇದು ಜನರು ಕಷ್ಟಪಟ್ಟು ಸಂಪಾದಿಸಿದ ಹಣ, ಇದನ್ನು ಹಿಂದಿನ ಸರ್ಕಾರ ದುರುಪಯೋಗಪಡಿಸಿಕೊಂಡಿತು. ಅವರು ಜನರ ಮುಂದೆ ಪ್ರತಿ ಪೈಸೆಗೂ ಲೆಕ್ಕ ಹಾಕಬೇಕಾಗುತ್ತದೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಮೂರು ದಿನಗಳ ವಿಧಾನಸಭಾ ಅಧಿವೇಶನವು ಸಾರ್ವಜನಿಕ ಕಲ್ಯಾಣ ಉಪಕ್ರಮಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಎಲ್ಲಾ ಶಾಸಕರು ಮೊದಲ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸ್ಪೀಕರ್ ಮತ್ತು ಉಪಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಅವರು ನಾಳೆ ಬೆಳಿಗ್ಗೆ ಲೆಫ್ಟಿನೆಂಟ್ ಗವರ್ನರ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಅಧಿವೇಶನವು ದೆಹಲಿಯ ಜನರ ಹಕ್ಕುಗಳು ಮತ್ತು ಕಲ್ಯಾಣದ ಮೇಲೆ ಕೇಂದ್ರೀಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj