ಲವ್ ಜಿಹಾದ್ ಆರೋಪ: ಮುಸ್ಲಿಂ ಯುವಕನಿಗೆ ಥಳಿತ

09/04/2024
ಲವ್ ಜಿಹಾದ್ ಆರೋಪ ಹೊರಿಸಿ ಮಹಾರಾಷ್ಟ್ರದಲ್ಲಿ ಮುಸ್ಲಿಂ ಯುವಕನನ್ನು ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ. ಪುಣೆಯ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿಯ ಮೇಲೆ ಈ ಕ್ರೌರ್ಯ ಎಸಗಲಾಗಿದೆ.
ಈತ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹೊರ ಬರುತ್ತಿದ್ದ. ಆಗ ದುಷ್ಕರ್ಮಿಗಳ ಗುಂಪು ಯುವಕನ ಬಳಿ ಬಂದು ಆಧಾರ್ ಕಾರ್ಡನ್ನು ಕೇಳಿದೆ. ಯುವಕ ಮುಸ್ಲಿಂ ಎಂದು ಗೊತ್ತಾದೊಡನೆ ಥಳಿಸಿದೆ.
ಪೊಲೀಸರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಕುರಿತಂತೆ ತನಿಖೆಗೆ ಪ್ರತ್ಯೇಕ ಸಮಿತಿಯನ್ನು ನೇಮಿಸಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth