ದಕ್ಷಿಣ ಕನ್ನಡ: ಮಕ್ಕಳಲ್ಲಿ ಮೆದುಳು ಜ್ವರ ನಿಯಂತ್ರಣಕ್ಕೆ ಡಿಸೆಂಬರ್ 5ರಿಂದ ಲಸಿಕಾ ಅಭಿಯಾನ
ಮಕ್ಕಳಿಗೆ ಮಾರಣಾಂತಿಕವಾಗ ಬರುವ ಮೆದುಳು ಜ್ವರ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 5ರಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಅಭಿಯಾನದ ಮೂಲಕ 1ರಿಂದ 15 ವರ್ಷದ ಮಕ್ಕಳಿಗೆ ಜೆಇ ಲಸಿಕೆಯನ್ನು ನೀಡಲಾಗುವುದು, ಹಾಗೆಯೇ ಮುಂದೆ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದಡಿಯಲ್ಲಿ 9 ಮತ್ತು 16 ತಿಂಗಳ ವಯಸ್ಸಿ ಮಕ್ಕಳಿಗೆ JE ಲಸಿಕೆಯನ್ನು ಎರಡು ಡೋಸ್‌ಗಾಗಿ ನೀಡಲಾಗುವುದು. ಜಿಲ್ಲೆಯಾದ್ಯಂತ ಜಿ.ಇ ಲಸಿಕಾ ಅಭಿಯಾನ ನಡೆಯಲಿದೆ.
ಜಿಲ್ಲೆಯಲ್ಲಿ 3,514 ಲಸಿಕಾ ಕೇಂದ್ರಗಳಲ್ಲಿ ಅಭಿಯಾನ ನಡೆಯಲಿದ್ದು, 4,73,770 ಮಕ್ಕಳನ್ನು ಗುರುತಿಸಲಾಗಿದೆ. ಮೊದಲನೇ ವಾರದಲ್ಲಿ ಎಲ್ಲಾ ಶಾಲೆಗಳಲ್ಲಿ ಲಸಿಕಾ ಕೇಂದ್ರಗಳನ್ನು ಆಯೋಜಿಸಿ ಲಸಿಕಾಕರಣ ನಡೆಸಲಾಗುವುದು. ನಂತರ ಎರಡು ವಾರಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾಕರಣ ನಡೆಸಲಾಗುತ್ತದೆ ಎಂದರು.
ಡಿಸೆಂಬರ್ 5ರಂದು ಲೇಡಿಹಿಲ್ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka