ವಿದ್ಯುತ್ ಕಂಬ ಏರಿದ್ದ ಲೈನ್ ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

ವಿದ್ಯುತ್ ಕಂಬ ಏರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ ಮುಳಿಮಜಲು ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ದ್ಯಾಮಣ್ಣರಿಗೆ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ.
ಕಂಬದಲ್ಲೇ ಕೆಲಕಾಲ ಬಾಕಿಯಾಗಿದ್ದ ಅವರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw