ಕೆನರಾ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ: ಈಗಲೇ ಅರ್ಜಿ ಸಲ್ಲಿಸಿ - Mahanayaka
12:48 AM Saturday 18 - October 2025

ಕೆನರಾ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ: ಈಗಲೇ ಅರ್ಜಿ ಸಲ್ಲಿಸಿ

canara bank
24/06/2024

ಬೆಂಗಳೂರು:  ಕೆನರಾ ಬ್ಯಾಂಕ್‌ ನಲ್ಲಿ ಖಾಲಿ ಇರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


Provided by

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯ ಜವಾಬ್ದಾರಿ ನೀಡಲಾಗುತ್ತದೆ. ಆಯ್ಕೆಯ ಬಳಿಕ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತನ, ಇತರ ಸೌಲಭ್ಯಗಳು ದೊರೆಯಲಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, ಎಸ್ ಸಿ/ಎಸ್ ಟಿ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಬಿಕಾಂ ಪದವಿ ಪಡೆದಿರುವ, ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳು ಆಯ್ಕೆ ಮಾಡಿ ಮುಖಾಮುಖಿ ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment  ಗೆ ಭೇಟಿ ನೀಡಿ ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ ಲೋಡ್ ಮಾಡಿ. ಅರ್ಜಿಯನ್ನು ಭರ್ತಿ ಮಾಡಿ. ಫೋಟೋ, ಸಹಿ, ಶೈಕ್ಷಣಿಕ ಪ್ರಮಾಣಪತ್ರ, ಅನುಭವದ ಪುರಾವೆ ಸೇರಿದಂತೆ ಇತರ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ.

ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದೆ. ಇದನ್ನು ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮಾಡಿ. ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಅಂಚೆ ಮೂಲಕ ಜೂನ್ 30ರೊಳಗೆ ಸಲ್ಲಿಸಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ