ಬೆಂಗಳೂರು: ವಿರೋಧದ ಹಿನ್ನೆಲೆ ಕೊರಗಜ್ಜ ನೇಮೋತ್ಸವ ರದ್ದು
ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ನೋಡಿ ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ.
ಯಲಹಂಕದ ಚೊಕ್ಕನಹಳ್ಳಿಯಲ್ಲಿ ನವೆಂಬರ್ 26ರಂದು ಕೆಲವರು ಕೊರಗಜ್ಜ ನೇಮ ಆಚರಿಸಲು ಮುಂದಾಗಿದ್ದರು. ಆದರೆ, ದೈವಾರಾಧನೆ ಹೆಸರಿನಲ್ಲಿ ಹಣ ಮಾಡಲು ಮುಂದಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ತೀವ್ರ ವಿರೋಧದ ಬಳಿಕ ನೇಮೋತ್ಸವ ರದ್ದಾಗಿದೆ.
ದೈವಾರಾಧನೆ ತುಳುನಾಡಿನ ಮಣ್ಣಿನಲ್ಲಿಯೇ ನಡೆಯಬೇಕು ಎಂದು ತುಳುನಾಡಿನ ಕೆಲವರು ವಾದಿಸುತ್ತಿದ್ದು, ಹೀಗಾಗಿ ಬೆಂಗಳೂರಿನಲ್ಲಿ ನೇಮೋತ್ಸವ ರದ್ದಾಗಿದೆ. ತುಳುನಾಡಿನಲ್ಲಿ ಮಾತ್ರವೇ ದೈವಾರಾಧನೆ ಮಾಡಬೇಕು ಅನ್ನೋದು ಸರಿಯೇ ತಪ್ಪೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka