ದನದ ಕೊಟ್ಟಿಗೆಯಲ್ಲಿ ಮಲಗಿದ್ರೆ ಕ್ಯಾನ್ಸರ್ ವಾಸಿಯಾಗುತ್ತದೆ: ಉತ್ತರ ಪ್ರದೇಶ ಸಚಿವ ಹೇಳಿಕೆ! - Mahanayaka
12:15 AM Thursday 21 - August 2025

ದನದ ಕೊಟ್ಟಿಗೆಯಲ್ಲಿ ಮಲಗಿದ್ರೆ ಕ್ಯಾನ್ಸರ್ ವಾಸಿಯಾಗುತ್ತದೆ: ಉತ್ತರ ಪ್ರದೇಶ ಸಚಿವ ಹೇಳಿಕೆ!

sanjay singh gangwar
14/10/2024


Provided by

ಲಕ್ನೋ: ಕ್ಯಾನ್ಸರ್ ರೋಗಿಗಳು ದನದ ಕೊಟ್ಟಿಗೆಯಲ್ಲಿ ಮಲಗಿದ್ರೆ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವರೊಬ್ಬರು ಹೇಳಿಕೆ ನೀಡಿದ್ದು, ನಗೆಪಾಟಲಿಗೀಡಾಗಿದೆ.

ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಈ ರೀತಿಯ ಹೇಳಿಕೆ ನೀಡಿದವರಾಗಿದ್ದಾರೆ. ಭಾನುವಾರ ತಮ್ಮ ಕ್ಷೇತ್ರವಾದ ಪಿಲಿಭಿತ್‌ನ ಪಕಾಡಿಯಾ ನೌಗಾವಾನ್‌ನಲ್ಲಿ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದರು.

ಹಸುಗಳಿಗೆ ಮೇವು ನೀಡಿ ಸಾಕುವುದರಿಂದ ರಕ್ತದೊತ್ತಡ ಸಮಸ್ಯೆಯು ಕೇವಲ 10 ದಿನಗಳಲ್ಲಿ ಅರ್ಧದಷ್ಟು ಕಡಿಮೆಯಾಗುತ್ತದೆ ಎಂದೂ ಈ ಸಚಿವರು ಹೇಳಿದ್ದಾರೆ.

ಇನ್ನೂ ಜನರು ತಮ್ಮ ವಿವಾಹ ವಾರ್ಷಿಕೋತ್ಸವ ಮತ್ತು ಜನ್ಮ ದಿನವನ್ನು ಗೋಶಾಲೆಗಳಲ್ಲಿ ಆಚರಿಸುವಂತೆ ಸಚಿವರು ಇದೇ ವೇಳೆ ಒತ್ತಾಯಿಸಿದ್ದಾರೆ.

ಕ್ಯಾನ್ಸರ್ ರೋಗಿ ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ, ಕ್ಯಾನ್ಸರ್ ಕಾಯಿಲೆ ಕೂಡ ವಾಸಿಯಾಗುತ್ತದೆ ಎಂದು ಸಚಿವರು ಹೇಳಿಕೆ ನೀಡಿದ್ದು, ಈ ಹೇಳಿಕೆ ಇದೀಗ ನಗೆಪಾಟಲಿಗೀಡಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ