ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕ್ಯಾಂಟರ್ ಸುಟ್ಟು ಭಸ್ಮ!

h d kote
23/02/2025

ಮೈಸೂರು: ಕಬ್ಬಿನ ಸೋಗು ತುಂಬಿಸಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಕ್ಯಾಂಟರ್ ಹೊತ್ತಿ ಉರಿದ ಘಟನೆ  ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ಬೆಟ್ಟದಬೀಡು ಗ್ರಾಮದಲ್ಲಿ ವಿದ್ಯುತ್ ತಂತಿ ಕ್ಯಾಂಟರ್ ಗೆ ತಗುಲಿದ್ದು, ಪರಿಣಾಮವಾಗಿ ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಗೆ ಕ್ಯಾಂಟರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಘಟನೆ ವೇಳೆ ಕ್ಯಾಂಟರ್ ಚಾಲಕ  ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಆತಂಕದಿಂದ ನೋಡುತ್ತಿರುವ ದೃಶ್ಯ ಕಂಡು ಬಂತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version