ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಕಾರು: ಓರ್ವನ ದಾರುಣ ಸಾವು! - Mahanayaka
8:12 AM Wednesday 10 - December 2025

ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಕಾರು: ಓರ್ವನ ದಾರುಣ ಸಾವು!

car accident in udupi
21/11/2022

ಕಾರ್ಕಳ: ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಕಾಪು ತಾಲೂಕಿನ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ