ಕಾರು –ಬೈಕ್ ನ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ!
ಉಡುಪಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ.
ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಉಸಿರುಚೆಲ್ಲಿದ್ದಾನೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದೇ ಸಂದರ್ಭದಲ್ಲಿ ಸ್ಟ್ಯಾಲಿನ್ ನ ಹಿಂದಿನಿಂದ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು, ರಸ್ತೆಯ ಬದಿಯ ಪೊದೆಗೆ ನುಗ್ಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka