ಕಾರು– ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

accident in dharawad
09/10/2026

ಧಾರವಾಡ: ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ.

ವಿಜಯಪುರ ಮೂಲದ ಅಜೀತ್, ರಾಕೇಶ್, ಸಂದೀಪ್ ಹಾಗೂ ಸಿದ್ದಾಪೂರದ ಶೃತಿ ಮೃತ ದುರ್ದೈವಿಗಳಾಗಿದ್ದಾರೆ.

ಧಾರವಾಡ ಹಾಗೂ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ ಕ್ಯಾಂಟರ್ ವಾಹನಗಳು ಅಮರಗೋಳ ಗ್ರಾಮದ ಬಳಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆ ಎಷ್ಟು ಭಯಾನಕವಾಗಿತ್ತೆಂದರೆ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮಾಹಿತಿ ತಿಳಿದ ಕೂಡಲೇ ನವಲಗುಂದ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮೃತದೇಹಗಳನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler
Exit mobile version