ಕೆಟ್ಟು ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: 6 ಮಂದಿಯ ದಾರುಣ ಸಾವು, ನಾಲ್ವರ ಸ್ಥಿತಿ ಗಂಭೀರ

ತೆಲಂಗಾಣ : ಕೆಟ್ಟು ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಲ್ಗೊಂಡದಲ್ಲಿ ನಡೆದಿದೆ.
ಘಟನೆಯಲ್ಲಿ ಹೈದರಾಬಾದ್ ನ ನಾಲ್ವರು ಪುರುಷರು, ಮಹಿಳೆ ಮತ್ತು ಹೆಣ್ಣು ಮಗು ಸೇರಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಅವರು ವಿಜಯವಾಡಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಅಪಘಾತ ಸಂಭವಿಸಿದಾಗ ಕಾರಿನಲ್ಲಿ ಒಟ್ಟು 10 ಮಂದಿ ಪ್ರಯಾಣಿಸುತ್ತಿದ್ದು, ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ತೆಲಂಗಾಣದ ರಾಜಧಾನಿ ಹೈದರಾಬಾದ್ ನಿಂದ ಸುಮಾರು 180 ಕಿ.ಮೀ. ದೂರದಲ್ಲಿರುವ ನಲ್ಗೊಂಡ ಜಿಲ್ಲೆಯ ಕೊಡಡಾ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ.
ಹೈದರಾಬಾದ್–ವಿಜಯವಾಡ ಹೆದ್ದಾರಿಯಲ್ಲಿ ರಿಪೇರಿಗಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಕೊಡಾದ ಡಿಎಸ್ ಪಿ ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth