ಸ್ಕೂಟರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರ ತಂಗುದಾಣ ಡಿಕ್ಕಿ ಹೊಡೆದ ಕಾರು!

konajje
20/06/2023

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿ ಬರುತ್ತಿದ್ದ ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಘಟನೆ ನಡೆದಿದೆ.

ಈ ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಿಲ್ದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ಅದೇ ಸಮಯದಲ್ಲಿ ತಂಗುದಾಣದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಪಾರಾಗಿದ್ದಾರೆ.

ವ್ಯಕ್ತಿಯೊಬ್ರು ವಿದೇಶದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗ್ಗೆ ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಸಂಬಂಧಿಕ ಕಾರು ಚಲಾಯಿಸುತ್ತಿದ್ದು ಚಾಲಕ ಹಾಗೂ ಅಶ್ರಫ್ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version