ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಕಾರು: ಮೂವರು ಸಾವು - Mahanayaka
4:52 PM Wednesday 29 - October 2025

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಕಾರು: ಮೂವರು ಸಾವು

mandya accident
04/02/2024

ಮಂಡ್ಯ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸಾಗರ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ.

ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ