ಬಿ.ಸಿ.ರೋಡ್ ವೃತ್ತಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು, ಐದು ಮಂದಿಗೆ ಗಾಯ
ಬಿ.ಸಿ.ರೋಡ್: ಕಾರೊಂದು ಬಿ.ಸಿ.ರೋಡ್ ಮುಖ್ಯವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಇನ್ನೋವಾ ಕಾರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಬಿ.ಸಿ.ರೋಡ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರು ಮೃತಪಟ್ಟು ಐದು ಮಂದಿಗೆ ಗಾಯವಾಗಿದೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದೆ.
ಮೃತಪಟ್ಟವರ ಮಾಹಿತಿ ತಿಳಿದು ಬಂದಿಲ್ಲ, ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ವಾಹನದಲ್ಲಿದ್ದವರನ್ನು ತೆರವುಗೊಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























