ಟ್ರಾನ್ಸ್ ಫರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಂಭೀರ ಗಾಯ

06/09/2025
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ವೆಟರ್ನರಿ ಆಸ್ಪತ್ರೆ ಬಳಿ ಭೀಕರ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಟ್ರಾನ್ಸ್ ಫರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಯಿಂದಾಗಿ ಎರಡು ವಿದ್ಯುತ್ ಕಂಬಗಳು ಮುರಿದು ಹಾಗೆಯೇ ನಿಂತಿವೆ. ಕಂಬಗಳು ಸಂಪೂರ್ಣವಾಗಿ ಬಿದ್ದುಹೋಗಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD