ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಕಾರು: ಮೂವರಿಗೆ ಗಾಯ
22/11/2025
ಸುಳ್ಯ: ಕಾರೊಂದು ರಸ್ತೆ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕನಕಮಜಲು ಬಳಿಯ ಕನ್ನಡ್ಕದಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಕಾರು ಚಾಲಕ ಮಂಡೆಕೋಲು ನಿವಾಸಿ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಕಾರು ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಕೂಡಲೇ ಆಟೋ ರಿಕ್ಷಾದಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























