ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಒಬ್ಬ ವಕೀಲ ಸ್ಥಳದಲ್ಲೇ ಸಾವು

ballari
01/12/2024

ಬಳ್ಳಾರಿ:  ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಒಬ್ಬ ವಕೀಲ ಸಾವನ್ನಪ್ಪಿರುವ ಘಟನೆ ಆಂಧ್ರ ಗಡಿಭಾಗದ ವಿಡಪನಕಲ್ ಬಳಿ ನಡೆದಿದೆ.

ಡಾ.ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆಯ ವೈದ್ಯ ಅಮರೇಗೌಡ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿದೇಶ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಳಗ್ಗಿನ ಜಾವ ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version