ಬ್ರೇಕ್ ಬದಲು ಆಕ್ಸಿಲೇಟರ್ ಒತ್ತಿದ ಕಾರು ಚಾಲಕ: ಕಸ ಗುಡಿಸುತ್ತಿದ್ದ ಮಹಿಳೆ ಬಲಿ

ದೆಹಲಿ: ಮನೆಯ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ.
ಜಾನಕಿ ಕುಮಾರಿ(65) ಮೃತಪಟ್ಟವರಾಗಿದ್ದು, ಇವರು ಗೀತಾ ಕಾಲೋನಿ ನಿವಾಸಿಯಾಗಿದ್ದಾರೆ. ಇವರು ತಮ್ಮ ಮನೆಯ ಮುಂದೆ ಕಸ ಗುಡಿಸುತ್ತಿದ್ದ ವೇಳೆ ಕಾರೊಂದು ಬಂದಿದ್ದು, ಆಕಸ್ಮಿಕವಾಗಿ ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಮುಕುಲ್ ರಾಥೋಡ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರೇಕ್ ಪ್ರೆಸ್ ಮಾಡುವ ಬದಲು ಚಾಲಕ ಆಕ್ಸಿಲೇಟರ್ ಬಟನ್ ಪ್ರೆಸ್ ಮಾಡಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಕ್ಷಣ ಕಾಲದಲ್ಲೇ ಘಟನೆ ನಡೆದು ಹೋಗಿತ್ತು. ಕಾರು ಚಾಲಕ ಮೃತರ ಮನೆಯ ಪಕ್ಕದಲ್ಲೇ ವಾಸವಿದ್ದ ಎನ್ನಲಾಗಿದೆ.
A car driver hit an elderly woman who was sweeping outside her house in Delhi’s Geeta Colony area. pic.twitter.com/He4jZdXjId
— Nikhil Choudhary (@NikhilCh_) March 20, 2024
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth