250 ಅಡಿ ಪ್ರಪಾತಕ್ಕೆ ಬಿದ್ದ ಕಾರು: ತೆಲಂಗಾಣ ಮೂಲದ ಐವರಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಕಾರೊಂದು 250 ಅಡಿ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ನಡೆದಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದೆ. ಮಾಹಿತಿಗಳ ಪ್ರಕಾರ ತೆಲಂಗಾಣ ಮೂಲದ ಕಾರು ಇದಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನ ಸ್ಥಳೀಯರು ಹಾಗೂ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
250 ಅಡಿ ಎತ್ತರದಿಂದ ಬೀಳುವಾಗ ಮರ, ರೆಂಬೆ–ಕೊಂಬೆಗಳಿಗೆ ಸಿಲುಕಿದೆ ಹೀಗಾಗಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮರದ ರೆಂಬೆ–ಕೊಂಬೆಗಳಿಗೆ ಸಿಲುಕಿ ಕಾರು ಅಲ್ಲೇ ನಿಂತಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: