ಸೇತುವೆಯಿಂದ ಹೊಳೆಗೆ ಬಿದ್ದ ಕಾರು: ಓರ್ವ ಸಾವು, ಓರ್ವನ ಸ್ಥಿತಿ ಗಂಭೀರ - Mahanayaka

ಸೇತುವೆಯಿಂದ ಹೊಳೆಗೆ ಬಿದ್ದ ಕಾರು: ಓರ್ವ ಸಾವು, ಓರ್ವನ ಸ್ಥಿತಿ ಗಂಭೀರ

dakshinakannada
11/06/2023


Provided by

ಸೇತುವೆಯಿಂದ ಕಾರು ಹೊಳೆಗೆ ಬಿದ್ದು ಓರ್ವ ಮೃತಪಟ್ಟು,  ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50), ಗಾಯಗೊಂಡವನನ್ನು ಗೋಪಿ (48) ಎಂದು ಗುರುತಿಸಲಾಗಿದೆ. ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು.

ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ. ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ನೆಲ್ಯಾಡಿ ಹೊರಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ